ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ದಾಸ ಸಾಹಿತಿ ಕವಿ ಕನಕ ದಾಸರ ಜಯಂತಿಯನ್ನು ತಾಲೂಕು ಆಡಳಿತ ಸೌಧದಲ್ಲಿ ನ.30 ರಂದು ಆಚರಿಸಲಾಯಿತು.
ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಭಾರತದ ಸನಾತನ ಪರಂಪರೆಗೆ ದಾಸ ಸಾಹಿತ್ಯದ ಮೂಲಕ ಸನಾತನ ಶಕ್ತಿಯ ವಾರಿಸುದಾರರಲ್ಲಿ ಕನಕದಾಸರು ಒಬ್ಬರು. ಅವರ ಸಾಹಿತ್ಯದಲ್ಲಿ ಅಮೋಘ ಸಂದೇಶವಿದೆ ಇದರಿಂದ ಜನ ಸಾಮಾನ್ಯರ ಬದುಕಿಗೆ ಪ್ರೇರಣೆಯಾಗಿದೆ ಎಂದರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕ ಪವಾಡಪ್ಪ ಕನಕದಾಸರ ಕುರಿತು ಮಾತನಾಡಿದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಶರಿ,ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಕಿ ರತ್ನಾವತಿ, ಕಂದಾಯ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು.
ತಾಲೂಕು ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.