Site icon Suddi Belthangady

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪರಮ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆ ಯವರು ಉರುವಾಲು ಗ್ರಾಮದ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳಿಗೆ ಬಿಡುಗಡೆ ಮಾಡಲಾದ 2 ಲಕ್ಷ ರೂ. ದೇಣಿಗೆ ಹಸ್ತಾಂತರವನ್ನು ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಆಡಳಿತ ಮಂಡಳಿಯ ಸದಸ್ಯರಾದ ಶಂಕರ ನಾರಾಯಣ ಭಟ್, ಜನಾರ್ದನ ಗೌಡ, ಶೇಷಪ್ಪ ರೈ, ಲಿಂಗಪ್ಪ ನಾಯ್ಕ್ ಹರೀಶ್ ಕುಮಾರ್, ಆರ್ಥಿಕ ಸಮಿತಿಯ ಸಂಚಾಲಕ ಪ್ರಭಾಕರ ಪೊಸಂದೊಡಿ, ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ಶಿವಾನಂದ, ಸೇವಾ ಪ್ರತಿನಿಧಿ ಸೀತಾರಾಮ್ ಮೊದಲಾದವರು ಉಪಸ್ಥಿತರಿದ್ದರು.

Exit mobile version