ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ದಂತ ವೈದ್ಯರಾಗಿ ಸೇವೆ ಸಲ್ಲಿಸಿ ಅಪಾರ ಜನಮೆಚ್ಚುಗೆಗೆ ಪಾತ್ರರಾಗಿದ್ದ ಡಾ.ಪ್ರಕೃತಿ ಶೆಟ್ಟಿ ಅವರಿಗೆ ಬಿಳ್ಕೊಡುಗೆ ಸಮಾರಂಭ ಆಸ್ಪತ್ರೆಯಲ್ಲಿ ನ.30ರಂದು ನಡೆಯಿತು.
ಹಾಗೂ ಹೊಸದಾಗಿ ದಂತ ವೈದ್ಯರಾಗಿ ಬಂದಿರುವ ಡಾ.ಸಾವನ್ ರೈ ಅವರನ್ನು ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕರಾದ ಡಾ.ವಂದನಾ ಎಂ ಇರ್ವತ್ರಾಯ,ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ, ದಂತ ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ.ಸಾವನ್ ರೈ, ಆಡಳಿತಾಧಿಕಾರಿ ಜ್ಯೋತಿ ವಿ ಸ್ವರೂಪ್ ಹಾಗೂ ಆಡಳಿತ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
p>