ಬೆಳ್ತಂಗಡಿ: ಶ್ರೀ ರಾಮಕೃಷ್ಣ ಪ್ರೌಢಶಾಲೆ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಭಾವಗೀತೆಯಲ್ಲಿ ದ್ವಿತೀಯ ಸ್ಥಾನ ಹಾಗೂ ರಸಪ್ರಶ್ನೆಯಲ್ಲಿ ಚಿನ್ಮಯ್ ಜಿ.ಕೆ, ಸುಯೇಶ್ ಪ್ರಭು ಇವರ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ.