


ಧರ್ಮಸ್ಥಳ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮಿತಿ, ಜಿಲ್ಲಾ ಶ್ರೀ ಮದ್ಭಗವದ್ಗೀತಾ ಸಮಿತಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು, ಯಕ್ಷ ಭಾರತಿ ಕನ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ “ಭಗವದ್ಗೀತಾ ಅಭಿಯಾನ-2023” ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿನ ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.


ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಆರಾಧ್ಯ ಪಿ ಜೋಶಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಪ್ರೌಢಾಶಾಲಾ ವಿಭಾಗದಲ್ಲಿ ಚಂದನ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶ್ರೀರಕ್ಷಾ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಅನ್ವಿತಾ ಹೆಬ್ಬಾರ್ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


            





