ಬೆಳ್ತಂಗಡಿ: ನ.30ರಂದು ತಾಲೂಕು ಕ್ರೀಡಾಂಗಣ ಪುತ್ತೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಇದರಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ.ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ಬಿ ಇವರು ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ 100ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ
