Site icon Suddi Belthangady

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

ಧರ್ಮಸ್ಥಳ : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ರಾಮಕೃಷ್ಣ ಶಾಲೆ, ಬಂಟ್ಸ್ ಹಾಸ್ಟೆಲ್ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ. ಬಹುಮಾನ ವಿಜೇತರ ವಿವರ ಈ ಕೆಳಗಿನಂತಿದೆ.

ಪ್ರಾಥಮಿಕ ವಿಭಾಗದಲ್ಲಿ ಲಘು ಸಂಗೀತ ದಲ್ಲಿ ಏಳನೆಯ ತರಗತಿಯ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಹತ್ತನೇ ತರಗತಿಯ ಹಂಸಿನಿ ಭಿಡೆ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಅನಘ ಎಂ ಡಿ, ಅನ್ವಿತಾ ಎಂ ಹೆಬ್ಬಾರ್, ಸಂಜನಾ, ಹಿತೇಶ್, ಧೀಮಂತ ಆದರ್ಶ ಇವರ ತಂಡವು ಕವ್ವಾಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತದೆ.

Exit mobile version