Site icon Suddi Belthangady

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಪ್ರಜಾಪ್ರಭುತ್ವ ವೇದಿಕೆಯಿಂದ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜನಾಂದೋಲನ ಸಭೆ

ಉಜಿರೆ: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ, ಉಜಿರೆ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಕು.ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ರಕ್ತದಲ್ಲಿ ಸಹಿ ಹಾಕಿ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುವ ಸಲುವಾಗಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜನಾಂದೋಲನ ಸಭೆ ಡಿ.3ರಂದು ಉಜಿರೆ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲಾ ಬಳಿ ದೀಪ ಪ್ರಜ್ವಲಿಸುವ ಮೂಲಕ ನಡೆಯಿತು.

ವೇದಿಕೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್, ತುಳುನಾಡ ದೈವರಾಧನೆ ವಿಮರ್ಷಕ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ , ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ ಗೌಡ, ಮಾನವ ಹಕ್ಕು ಆಯೋಗದ ದಿನೇಶ್ ಗಣಿಗ ಉಪಸ್ಥಿತಿ ಇದ್ದರು.ಕಾರ್ಯಕ್ರಮವನ್ನು ಮನೋಜ್ ಕುಂಜರ್ಪ ಇವರು ಸ್ವಾಗತಿಸಿ ಅನಿಲ್ ಅಂತರ ನಿರೂಪಿಸಿ, ಸಂದೀಪ್ ಶೆಟ್ಟಿ ವಂದಿಸಿದರು.

Exit mobile version