Site icon Suddi Belthangady

ಉಳ್ಳಾಲ: ಸಂಯೋಜಕ ಮೋಹನ್ ಶಿರ್ಲಾಲ್ ಸಂಯೋಜನೆಯಲ್ಲಿ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲೆ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಮಂಗಳೂರು ತಾಲೂಕು ಯುವಜನ ಒಕ್ಕೂಟ, ಉಳ್ಳಾಲ ನಗರಸಭೆ ಹಾಗೂ ಶ್ರುತಿಲಯ ಕಲಾಕೇಂದ್ರ ಕುತ್ತಾರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ 2023-24 ಉಳ್ಳಾಲ ನಗರಸಭೆಯ ಬಯಲು ರಂಗ ಮಂದಿರದಲ್ಲಿ ಡಿ.2ರಂದು ನಡೆಯಿತು.

ಉಳ್ಳಾಲ ನಗರಸಭೆ ಸದಸ್ಯೆ ರೇಷ್ಮಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಪೌರಾಯುಕ್ತೆ ವಾಣಿ ವಿ.ಆಳ್ವ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸದಾಶಿವ್ ಉಳ್ಳಾಲ್, ಕಂದಾಯ ಅಧಿಕಾರಿ ನವೀನ್ ಹೆಗ್ಡೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀಕ್ಷಕ ಮಂಜು ಎಲ್. ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ವೈ ನಾಯಕ್ ಸ್ವಾಗತಿಸಿದರು.ಸಂಯೋಜಕ ಮೋಹನ್ ಶಿರ್ಲಾಲ್ ನಿರೂಪಿಸಿದರು.ರಫೀಕ್ ತುಂಬೆ ವಂದಿಸಿದರು.

Exit mobile version