ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲ ಪ್ರೀತಂ ಎಂಬವರಿಗೆ ಚಿಕ್ಕಮಗಳೂರು ಪೊಲೀಸರು ಹಲ್ಲೆ ನಡೆಸಿ ನಂತರ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ನ್ಯಾಯಾಲಯ ಆವರಣದಲ್ಲಿ ಡಿ.4 ರಂದು ಪ್ರತಿಭಟನೆ ನಡೆಯಿತು.
ಬೆಳ್ತಂಗಡಿ ತಾಲೂಕು ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಹಿರಿಯ ವಕೀಲ ಶಿವಕುಮಾರ್, ತಾಲೂಕು ವಕೀಲ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಮಾತನಾಡಿದರು.ಹಿರಿಯ ವಕೀಲ ಸಂಘ ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯ ವಕೀಲರು ಹಾಜರಿದ್ದರು.