ಮುಂಡಾಜೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಮುಂಡಾಜೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಕಕ್ಕಿಂಜೆ ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್)ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.”ಗ್ರಾಮೀಣ ಪ್ರದೇಶದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮ ಆಯೋಜಿಸಿದ್ದು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ, ಮಹಿಳೆಯರು ತರಬೇತಿ ಪಡೆದು ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವೀಯಾಗಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ, ಮುಂಡಾಜೆ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಕರ್ನಾಟಕ ಸ್ಟೇಟ್ ಟೈಲರ್ ಕ್ಷೇತ್ರ ಸಮಿತಿಯ ಅಧ್ಯಕ್ಷೆ ವೇದಾವತಿ, ಬ್ಯಾಂಕ್ ಒಫ್ ಬರೋಡ ಮುಂಡಾಜೆ ಶಾಖೆಯ ವ್ಯವಸ್ಥಾಪಕ ಅಶ್ವಿನ್, ಕಕ್ಕಿಂಜೆ ವಲಯದ ಅಧ್ಯಕ್ಷ ವಿನಯ ಚಂದ್ರ, ತರಬೇತುದಾರರಾದ ಸುಮನ ಉಪಸ್ಥಿತರಿದ್ದರು.ವನಿತಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಮುಂಡಾಜೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಈ 10 ದಿವಸದ ತರಬೇತಿ ಪಡೆಯಲಿದ್ದಾರೆ.