


ಬೆಳ್ತಂಗಡಿ: ಡಿ.4ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಕಾಲೇಜಿನ ಐಕ್ಯೂ ಎಸಿ ಘಟಕ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್-ರೆಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್ , ಹಳೆ ವಿದ್ಯಾರ್ಥಿ ಸಂಘ ಗಳು ದಕ್ಷಿಣ ಕನ್ನಡ ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರ ಮತ್ತು ವೆನ್ಲಾಕ್ ಆಸ್ಪತ್ರೆ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.
ಶಿಬಿರವನ್ನು ಉದ್ಘಾಟಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರದ ಸಂಯೋಜಕ ಪ್ರವೀಣ್ ಕುಮಾರ್ ರಕ್ತ ನೀಡುವುದರಿಂದ ಆಗುವ ಉಪಯೋಗಗಳು ಮತ್ತು ಅದರಿಂದ ನೂರಾರು ಜೀವಗಳನ್ನು ಉಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ ಎನ್ ಇವರು ವಹಿಸಿದ್ದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಸುಬ್ರಹ್ಮಣ್ಯ ಕೆ., ರಾಷ್ಟ್ರೀಯ ಸೇವಾ ಯೋಜನೆ ಘಟಕ ಅಧಿಕಾರಿಗಳಾದ ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಹಾಗೂ ಪ್ರೊ.ಕವಿತಾ, ರೇಂಜರ್ ಲೀಡರ್ ಪ್ರೊ.ರಾಜೇಶ್ವರಿ ಉಪಸ್ಥಿತರಿದ್ದರು.
ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ.ರವಿ ಎಂ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಸದರಿ ರಕ್ತದಾನ ಶಿಬಿರದಲ್ಲಿ ದಾಖಲೆ ಮಟ್ಟದಲ್ಲಿ 70 ರಕ್ತದಾನಿಗಳು ರಕ್ತ ನೀಡಿದರು.