Site icon Suddi Belthangady

ಡಾ.ಹೆಗ್ಗಡೆಯವರಿಂದ ಮೇಲಂತಬೆಟ್ಟು ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲಾ ಶತಮಾನೋತ್ಸವ ಸಂಭ್ರಮಾಚರಣೆಯು ಡಿ.22 ಮತ್ತು 23ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇತ್ತೀಚಿಗೆ ಬಿಡುಗಡೆಗೊಳಿಸಿ, ಶುಭಹಾರೈಸಿದರು.

ಬಳಿಕ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ‌‌.ಹರ್ಷೇಂದ್ರ ಕುಮಾರ್ ಅವರಿಗೂ ಆಮಂತ್ರಣ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ರೂಪಾ ಎಂ.ಬಿ, ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ನಡಕರ, ಉಪಾಧ್ಯಕ್ಷೆ ಜೆಸಿಂತ ಮೋನಿಸ್, ಕಾರ್ಯದರ್ಶಿ ಹರ್ಷ ಹೆಚ್.ಆರ್ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Exit mobile version