Site icon Suddi Belthangady

ಅಳದಂಗಡಿಯಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆ ಪೂರ್ವಭಾವಿ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷ ದೀಪೋತ್ಸವದ ಪ್ರಯುಕ್ತ ಉಜಿರೆಯಿಂದ ನಡೆಯುವ ಪಾದಯಾತ್ರೆಯ ಪೂರ್ವಭಾವಿ ಸಭೆ ಡಿ.3 ರಂದು ಅಳದಂಗಡಿ ಶ್ರೀ ಸೋಮನಾಥೆಶ್ವರಿ ಭಜನಾ ಮಂಡಳಿಯಲ್ಲಿ ಜನಜಾಗೃತಿ ವಲಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಶ್ಚ ರೈ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಅಳದಂಗಡಿ ಘಟಕದ ಪ್ರತಿನಿಧಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕಿ ಸುಮಂಗಳಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಪುಷ್ಪಾವತಿ ವಂದಿಸಿದರು.

Exit mobile version