


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ಸಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನಮುಕ್ತರ ಕುಟುಂಬೋತ್ಸವ ಡಿ.7ರಂದು ಪೂರ್ವಾಹ್ನ ಗಂಟೆ 10:30ರಿಂದ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರಗಲಿದೆ.
ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಡಾ.ಹೇಮಾವತಿ ವೀ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.


ಕಲ್ಬುರ್ಗಿಯ ಅಫ್ಜಲಪುರ ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡುವರು.ಯೋಜನೆಯ ಸಿಇಒ ಡಾ.ಎಲ್.ಎಚ್.ಮಂಜುನಾಥ್ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ನ ಟ್ರಸ್ಟಿ ಶ್ರದ್ಧಾ ಅಮಿತ್ ಸಾಧಕರಿಗೆ ಗೌರವ, ಟ್ರಸ್ಟಿ ವಿ.ರಾಮಸ್ವಾಮಿ ಗುರುತಿನ ಚೀಟಿ,ನಿಕಟ ಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಪ್ರಮಾಣ ಪತ್ರ ವಿತರಣೆ ನೆರವೇರಿಸುವರು.
ಟ್ರಸ್ಟಿಗಳಾದ ಡಾ.ಪಿ.ವಿ.ಭಂಡಾರಿ, ಡಾ. ಶ್ರೀನಿವಾಸ್ ಭಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ದೇವದಾಸ ಹೆಬ್ಬಾರ್, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್ ಉಪಸ್ಥಿತರಿರುವರೆಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯ್ಸ್ ತಿಳಿಸಿದ್ದಾರೆ.









