ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ಪ.ಪೂ ಕಾಲೇಜಿನಲ್ಲಿ ಮಕ್ಕಳ ರಕ್ತ ಹೀನತೆ ತಪಾಸಣೆ, ಚಿಕಿತ್ಸೆ

0

ಕಕ್ಯಪದವು: ಡಿ.7ರಂದು ಎಲ್.ಸಿ.ಆರ್ ಇಂಡಿಯನ್ ಪದವಿಪೂರ್ವ ಕಾಲೇಜು ಕಕ್ಯಪದವು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಸಹಯೋಗದೊಂದಿಗೆ ಎಲ್.ಸಿ.ಆರ್ ಇಂಡಿಯನ್ ಪದವಿಪೂರ್ವ ಕಾಲೇಜು ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ ಇದರ ಜಂಟಿ ಆಶ್ರಯದಲ್ಲಿ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಮಕ್ಕಳ ರಕ್ತ ಹೀನತೆ ತಪಾಸಣೆ ಮತ್ತು ಚಿಕಿತ್ಸೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳ ಇಲ್ಲಿನ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಹಾಗೂ ಸಿಬ್ಬಂದಿಗಳ‌ ತಂಡ ಆಗಮಿಸಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ನಡೆಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ.ಎನ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ‌
ದೀಕ್ಷಿತಾ ಇವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here