Site icon Suddi Belthangady

ದ.ಕ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ- ಡಿ.9 ನೋಂದಣಿಗೆ ಕೊನೆಯ ದಿನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25,045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ.ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45,530 ಯುವಜನರು ಇದ್ದಾರೆ.ಡಿ.7ರವರೆಗೆ 25,045 ಜನ ಮಾತ್ರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿದ್ದಾರೆ, ಇನ್ನು 20,494 ಮಂದಿ ಬಾಕಿ ಇದ್ದು ಇವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.

ಯುವ ಮತದಾರರಲ್ಲಿ 3742 ಮಂದಿಯ ಫಾರ್ಮ್-6 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ.ಶೀಘ್ರದಲ್ಲಿ ಈ ಪ್ರಕ್ರಿಯೆ ಮುಗಿಸಿ ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು.ಚುನಾವಣಾ ಆಯೋಗವು ಪ್ರಸ್ತುತ ಪ್ರತಿ ವರ್ಷ ನಾಲ್ಕು ಅರ್ಹತಾ ದಿನಾಂಕವನ್ನು ಮತದಾರರು ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದೆ. ಪ್ರತಿ ವರ್ಷ ಜನವರಿ, ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳ 1ನೇ ತಾರೀಕು 18 ವರ್ಷ ಪೂರ್ತಿಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.

ಪ್ರಸ್ತುತ ಸಾಲಿನಲ್ಲಿ ಯುವ ಮತದಾರರು ಹೆಸರು ಸೇರ್ಪಡೆಗೆ ಡಿಸೆಂಬರ್ 9 ಕೊನೆಯ ದಿನಾಂಕವಾಗಿದೆ. ಮತದಾರರು VOTER HELP LINE ಸ್ಟೋರ್‌ನಿಂದ ಡೌನ್ ಲೋಡ್ ಮಾಡಿ ಫಾರ್ಮ್-6 ಸಲ್ಲಿಸಬಹುದು.ಮತದಾರರು ವೆಬ್ voters.eci.gov.in 2d ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಯವರಿಗೆ ಫಾರಂ-6 ಅರ್ಜಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Exit mobile version