ಕುತ್ಲೂರು: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಅಂಗಳ ಕಾರ್ಯಕ್ರಮವನ್ನು ಇತ್ತೀಚೆಗೆ ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುತ್ಲೂರು ಉನ್ನತೀಕರಿಸಿದ ಶಾಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100 ದಾಟಿದರೆ ಮುಂದಿನ ಹಂತದಲ್ಲಿ ಎಲ್.ಕೆ.ಜಿ, ಯುಕೆಜಿ ವಿಭಾಗವನ್ನು ಆರಂಭಿಸುವ ಬಗ್ಗೆ ಶಾಸಕ ಹರೀಶ್ ಪೂಂಜ ಭರವಸೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ನೋಟರಿ ವಕೀಲರು ಮುರಳಿ ಬಿ, ಬೆಳ್ತಂಗಡಿ ಶ್ರೀ ಮಹಾವೀರ ಎಂಟರ್ ಪ್ರೈಸಸ್ ಖ್ಯಾತ ಉದ್ಯಮಿ ಶಮಂತ್ ಕುಮಾರ್ ಜೈನ್, ರಾಜೇಂದ್ರ ಕುಮಾರ್ ಬೆಂಗಳೂರು, ನಾರಾವಿ ಗ್ರಾ.ಪಂ.ಮಾಜಿ ಅದ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಶಾಲಾ ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಶಿಕಾಂತ ಆರಿಗ, ಡೀಕಯ್ಯ ಪೂಜಾರಿ, ಸಿ.ಆರ್.ಪಿ ಸಂಪನ್ಮೂಲ ವ್ಯಕ್ತಿ ಕಿರಣ್ ಕುಮಾರ್, ನಾರಾವಿ ಗ್ರಾ.ಪಂ ಉಪಾಧ್ಯಕ್ಷೆ ಸುಮಿತ್ರಾ, ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾಲತಾ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ನಿಮಿತ್ ಕುಮಾರ್ ಜೈನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ರಾಮಚಂದ್ರ ಭಟ್ ಕುಕ್ಕುಜೆ ಅವರನ್ನು ವಿದ್ಯಾಭಿಮಾನಿಗಳು ಹಾಗೂ ಶಾಸಕರು ಶಾಲು ಫಲಪುಷ್ಪ ಸನ್ಮಾನ ಪತ್ರ ಹಾರ ಹಾಕಿ ಸನ್ಮಾನಿಸಿದರು.ಸುಮಾರು 15 ಶಾಲಾ ಅಭಿವೃದ್ಧಿಯ ದಾನಿಗಳಿಗೆ ಸನ್ಮಾನಿಸಲಾಯಿತು.
ಮುಖ್ಯೋಪಾಧ್ಯಾಯಿನಿ ರೂಪಲತಾ ವರದಿ ವಾಚಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ರಾಮಚಂದ್ರ ಕುಕ್ಕುಜೆ ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು.
ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹಳೆ ವಿದ್ಯಾರ್ಥಿ ಸಂಘದಿಂದ ವಠಾರ ನಾಟಕ ನಡೆಯಿತು.
ಉಪಾಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಕುತ್ಲೂರು ಗ್ರಾಮದ ಮಂಜುಶ್ರೀ ನಗರ ದಿನೇಶ್ ದೇವಾಡಿಗ ನಡೆಸಿಕೊಟ್ಟರು.ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಸುಜಯ ಹೆಗ್ಡೆ ಪಾರೊಟ್ಟು ರವರು ಧನ್ಯವಾದವಿತ್ತರು.ಕರುಣಾಕರ ಜೈನ್ ರವರು ಕಾರ್ಯಕ್ರಮ ನಿರೂಪಿಸಿದರು.