ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ 11ನೇ ವರ್ಷದ ಪಾದಯಾತ್ರೆಗೆ ಚಾಲನೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಗೆ ಭಕ್ತರು ಸಾಮೂಹಿಕವಾಗಿ ನಡೆಸುತ್ತಿರುವ ಭಕ್ತಿ ಭಜನೆಯ 11ನೇ ವರ್ಷದ ಪಾದಯಾತ್ರೆಗೆ ಶ್ರದ್ಧಾ ಅಮಿತ್ ರವರು ಚಾಲನೆ ನೀಡಿದರು.

ಸಾವಿರಾರು ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.ಪಾದಯಾತ್ರೆ ಶ್ರೀ ಕ್ಷೇತ್ರಕ್ಕೆ ತಲುಪಿದ ಬಳಿಕ ಭಕ್ತರನ್ನು ಉದ್ದೇಶಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪಾದಯಾತ್ರೆಯ ಸಂಚಾಲಕ ಪೂರನ್ ವರ್ಮ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಹೆಚ್ ಮಂಜುನಾಥ್, ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ದನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತಕೃಷ್ಣ ಭಟ್ಟ ಮಚ್ಚಿಮಲೆ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಉಜಿರೆ ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳು ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಯೋಗೀಶ್ ಕುಮಾರ್ ನಡಕರ, ವೆಂಕಟ್ ರಾವ್ ಆಡೂರ್, ಎಸ್.ಡಿ.ಎಮ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ್ ಹೆಗ್ಡೆ, ಸ್ವಾಯತ್ತ ಕಾಲೇಜಿನ ಉಪಪ್ರಾಂಶುಪಾಲ ಎಸ್.ಎನ್.ಕಾಕತ್ಕರ್, ಭಾಜಪಾ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜನಜಾಗೃತಿ ವೇದಿಕೆಯ ವಿವೇಕ್ ವಿ.ಪಾಯಸ್, ಪ್ರಮುಖರಾದ ಡಾ.ಎಂ.ಎನ್ ದಯಾಕರ್, ಕಸಾಪ ಜಿಲ್ಲಾಧ್ಯಕ್ಷ ಡಾ ಎಂ.ಪಿ ಶ್ರೀನಾಥ್, ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣಣ್, ಬಾಲಕೃಷ್ಣ ಶೆಟ್ಟಿ, ಪುಷ್ಪರಾಜ್ ಜೈನ್, ನ್ಯಾಯವಾದಿ ಧನಂಜಯ್ ರಾವ್, ಉದ್ಯಮಿ ಮೋಹನ್ ಕುಮಾರ್ ಉಜಿರೆ, ಮೋಹನ್ ಶೆಟ್ಟಿಗಾರ್, ಡಿ ಎ ರೈಮಾನ್, ಈಶ್ವರ ಬೈರ, ಅರುಣ್ ದಿಶಾ ಹಾಗೂ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

ಪಾದಯಾತ್ರೆಯ ಮೂಲಕ ಭಕ್ತಾದಿಗಳು ಧರ್ಮಸ್ಥಳಕ್ಕೆ ಕಾಲ್ನಾಡಿಗೆಯಲ್ಲಿ ಸಾಗಿದರು.

LEAVE A REPLY

Please enter your comment!
Please enter your name here