Site icon Suddi Belthangady

ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಸ್ಪರ್ಧಿಸಲು ಕರ್ನಾಟಕ ತಂಡಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜ್ ನ ವಿದ್ಯಾರ್ಥಿನಿ ಸುಪ್ರಿಯಾ ಎಸ್‌.ಪಿ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಸ್ಪರ್ಧಿಸಲು ಕರ್ನಾಟಕ ತಂಡಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜ್ ನ ವಿದ್ಯಾರ್ಥಿನಿ ಸುಪ್ರಿಯಾ ಎಸ್‌.ಪಿ ಆಯ್ಕೆಯಾಗಿದ್ದಾರೆ.

ಬಂಟ್ವಾಳದ ಚೆಂಡ್ತಿಮಾರು ನಿವಾಸಿ ಶ್ರೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಸುಪ್ರಿಯಾ ಎಸ್‌.ಪಿ ಇವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದು, ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಚೆನ್ನೈನಲ್ಲಿ ನಡೆಯಲಿರುವ 33ನೇ ತ್ರೋಬಾಲ್ ಚಾಂಪಿಯ ನ್ ಶಿಪ್ ಪಂದ್ಯದಲ್ಲಿ ಕರ್ನಾಟಕ ತಂಡದಿಂದ ಪ್ರತಿನಿಧಿಸಲಿದ್ದಾರೆ.

Exit mobile version