Site icon Suddi Belthangady

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಶಾಸ್ತ್ರ ಸಂಘ, ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ-2023ನೇ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ P.S.I ಆದ ಅರ್ಜುನ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಸಂಚಾರಿ ನಿಯಮಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಯಾವೆಲ್ಲ ರೀತಿಯ ಸಂಚಾರಿ ನಿಯಮಗಳಿವೆ, ಭಾರತೀಯ ಮೋಟಾರು ವಾಹನ ಕಾಯ್ದೆ, ಇನ್ಸೂರೆನ್ಸ್, ಹೆಲ್ಮೆಟ್ ಧಾರಣೆಯ ಮಹತ್ವ, ಸಂಚಾರಿ ನಿಯಮಗಳ ಪಾಲನೆಯಿಂದ ಆಗುವ ಲಾಭಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಒಂದು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಿ ಇಲಾಖೆಯ ಬಗ್ಗೆ ಯುವ ಜನರಲ್ಲಿರುವ ತಪ್ಪು ಪೂರ್ವಾನುಗ್ರಹ ದೂರ ಮಾಡುವ ಒಂದು ಪ್ರಾಮಾಣಿಕ ಪ್ರಯತ್ನ ಈ ಜಾಗೃತಿ ಕಾರ್ಯಕ್ರಮದ ಮೂಲಕ ಮಾಡಲಾಯಿತು.

ರಾಮಚಂದ್ರ A.S.I, ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿ, ಇವರು ಸಾರ್ವಜನಿಕರ ಜೀವವನ್ನು ರಕ್ಷಿಸುವಲ್ಲಿ ಸಂಚಾರಿ ನಿಯಮಗಳ ಪಾಲನೆಯ ಮಹತ್ವ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಘವ ಎನ್., ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ಪ್ರಾಧ್ಯಾಪಕರು ಹಾಗೂ ಎನ್ ಎಸ್ ಎಸ್ ಸಲಹೆಗಾರರಾದ ಡಾ.ಸುಬ್ರಹ್ಮಣ್ಯ ಕೆ., ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು.ವರ್ಷಾ ಪ್ರಥಮ ಬಿ.ಕಾಂ ಸ್ವಾಗತಿಸಿದರು.ಸಂದೇಶ್ ಪ್ರಥಮ ಬಿಬಿಎ ವಂದಿಸಿದರು. ಜಗದೀಶ, ಪ್ರಥಮ ಬಿ.ಎ ಪ್ರಾರ್ಥಿಸಿದರು.ಕು. ಪೂಜಾಶ್ರೀ ದ್ವಿತೀಯ ಬಿ.ಎ ನಿರೂಪಿಸಿದರು.

Exit mobile version