ಬೆಳ್ತಂಗಡಿ: ಒಬ್ಬ ವ್ಯಕ್ತಿ ಸಮಾಜದಲ್ಲಿ ಘನತೆ ಗೌರವದಿಂದ ಬಾಳಲು ಸಂವಿಧಾನ ಕೊಟ್ಟ ವರವೇ ಮಾನವ ಹಕ್ಕುಗಳು.ಮಾನವ ಹಕ್ಕುಗಳ ಉಲ್ಲಂಘನೆ ಆದಾಗ ಅದರ ವಿರುದ್ಧ ನಾವು ಹೋರಾಡಬೇಕು.ನಮ್ಮ ಹಕ್ಕುಗಳ ಬಗ್ಗೆ ನಾವು ಜಾಗೃತರಾಗಬೇಕು.ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಣೆ ಮಾಡುವ ಮೂಲಕ ನಮ್ಮ ಹಕ್ಕುಗಳ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತದೆ ಎಂದು ಬೈಂದೂರು ಆರಕ್ಷಕ ಠಾಣೆಯ ಪೊಲೀಸ್ ಕಾನ್ಟೇಬಲ್ ಹಾಲಪ್ಪ ಬಾಗಿ ಅಭಿಪ್ರಾಯಪಟ್ಟರು.
ಅವರು ಡಿ.11ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾನ್ಫರೆನ್ಸಾ ಎಪಿಸ್ಕೋಪಾಲೇ ಇಟಾಲಿಯನಾ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಶ್ರೀನಿಧಿ ಮಹಾಸಂಘ ಬಾಡ, ಅನುಗ್ರಹ ಮಹಾಸಂಘ ಕಲ್ಮಕ್ಕಿ, ಸೂರ್ಯ ಮಹಾಸಂಘ ಮದ್ದೋಡಿ ಹಾಗೂ ಪ್ರಗತಿ ಮಹಾಸಂಘ ತೂದಳ್ಳಿ ಇವುಗಳ ಸಹಭಾಗಿತ್ವದಲ್ಲಿ ಕಲ್ಮಕ್ಕಿ ಸಂತ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ಡಾ. ನಿವೇದಿತಾ ಹಾಗೂ ಬೈಂದೂರು ರೈತ ಸಂಪರ್ಕ ಕೇಂದ್ರದ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಕುಮಾರಿ ಅನುಷಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಬಾಡ ಶ್ರೀನಿಧಿ ಮಹಾಸಂಘದ ಅಧ್ಯಕ್ಷೆ ಭಾನುಮತಿ ಬಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಸ್ವಾಮಿ ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾನವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಲ್ಮಕ್ಕಿ ಅನುಗ್ರಹ ಮಹಾಸಂಘದ ಅಧ್ಯಕ್ಷೆ ಎಲ್ಸಮ್ಮ, ಹಾಗೂ ಮದ್ದೋಡಿ ಸೂರ್ಯ ಮಹಾಸಂಘದ ಅಧ್ಯಕ್ಷೆ ಸೋನಿಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಉಚಿತ ರಕ್ತದೊತ್ತಡ ಹಾಗೂ ಶುಗರ್ ಪರೀಕ್ಷೆ ನಡೆಸಲಾಯಿತು.
ಬೈಂದೂರು ವಲಯದ ಕಾರ್ಯಕರ್ತೆ ಸರೋಜರವರು ಸ್ವಾಗತಿಸಿ, ಮದ್ದೋಡಿ ಸೂರ್ಯ ಮಹಾಸಂಘದ ಕಾರ್ಯದರ್ಶಿ ವನಜರವರು ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕರ್ತರಾದ ಮುತ್ತು ಮೊಗವೀರ ಹಾಗೂ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿ ಒಟ್ಟು 83 ಮಂದಿ ಉಪಸ್ಥಿತರಿದ್ದರು.