


ರೆಖ್ಯದ ಶ್ರೀ ಅಯ್ಯಪ್ಪ ಮಾಲಾದಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಡಿಸೆಂಬರ್ 17 ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಿಂದ ಡಿ.17 ಭಾನುವಾರ ಬೆಳಿಗ್ಗೆ 5.00 ಗಂಟೆಗೆ ಸರಿಯಾಗಿ ಹೊರಡಲಿದೆ.


ಪಾದಯಾತ್ರೆಯಲ್ಲಿ ಶ್ರೀ ಅಯ್ಯಪ್ಪ ಮಾಲಾಧಾರಿಗಳು, ಸಮಸ್ತ ಹಿಂದೂ ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








