ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ರೆಡ್ ರಿಬ್ಬನ್ ಕ್ಲಬ್, ಭಾರತೀಯ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗು ಕರ್ನಾಟಕ ಸರಕಾರ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ವತಿಯಿಂದ ಡಿ.8.ರಂದು “ವಿಶ್ವ ಏಡ್ಸ್ ದಿನ” ವನ್ನು ಆಚರಿಸಲಾಯಿತು.
ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಕಾರ್ಯಕ್ರಮಕ್ಕೆ ಸಂಬಂಧಿಸಿದ ಭಿತ್ತಿ ಪತ್ರ ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಡಾ.ಸಂಜಾತ್ ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಬೆಳ್ತಂಗಡಿ ಇವರು ಆಗಮಿಸಿದ್ದರು.ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾದಂತಹ ಡಾ.ತಾರಕೇಶ್ವರಿ ವಿ. ಶೆಟ್ಟಿ ಕಿವಿ, ಮೂಗು , ಗಂಟಲು ತಜ್ಞರು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಇವರು ಏಡ್ಸ್ ನ ಕುರಿತಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ತಿಳಿಸಿದರು.ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ಆಗುವ ದುಷ್ಪರಿಣಾಮದ ಕುರಿತಾಗಿ ಅರಿವು ಮೂಡಿಸಿದರು.ಅತಿಥಿಯಾಗಿ ಅಜಯ್ ಕಲ್ಲೇಗ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬೆಳ್ತಂಗಡಿ ಇವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಡಾ.ಟಿ.ಕೆ.ಶರತ್ ಕುಮಾರ್ ವಹಿಸಿದ್ದರು.ಕಾರ್ಯಕ್ರಮವನ್ನು ನಾಗಶ್ರೀ ಇವರು ನಿರೂಪಿಸಿದರು.