Site icon Suddi Belthangady

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12ರಂದು ವಾರ್ಷಿಕ ಕ್ರೀಡಾಕೂಟವು ನೆರವೇರಿತು.

ಈ ಕ್ರೀಡಾಕೂಟವನ್ನು ಪ್ರಾರ್ಥನಾ ಗೀತೆಯನ್ನು ಹಾಡಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರಾದ ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂ|ಸ್ವಾ| ವಿಲಿಯಂ ಡಿಸೋಜರವರು ಧ್ವಜಾರೋಹಣವನ್ನು ನೆರವೇರಿಸಿದರು.ವಿದ್ಯಾರ್ಥಿಗಳು ಪಥ ಸಂಚಲನವನ್ನು ಮಾಡಿ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂ|ಸ್ವಾ| ವಿಲಿಯಂ ಡಿಸೋಜರವರು ವಹಿಸಿದ್ದರು.ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯು ಮಕ್ಕಳ ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಆಶಾದೀಪ ಕಾರ್ಮೆಲ್ ಸೆಮಿನರಿಯ ನಿರ್ದೇಶಕರಾದ ವಂ|ಸ್ವಾ|ಅಶ್ವಥ್ ಡಿಸೋಜ ಒಸಿಡಿ ರವರು ಆಗಮಿಸಿದ್ದರು.ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಕ್ಕಿದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿ, ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್  ಮೊರಸ್ ರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮೋಹನ್ ನಾಯಕ್ ರವರು, ಗಾರ್ಡಿಯನ್ ಏಂಜಲ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಹೆಲೆನ್ ಮೋನಿಕ ಲೋಬೊರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ -ರಕ್ಷಕ ಸಂಘದ ಸದಸ್ಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹಶಿಕ್ಷಕಿಯಾದ ಶುಭ್ರ ಜೈನ್ ರವರು ನಿರೂಪಿಸಿ, ವಿದ್ಯಾರ್ಥಿನಿಯರಾದ ಕುಮಾರಿ ಅಭಿಜ್ಞಾರವರು ಸ್ವಾಗತಿಸಿ, ಕುಮಾರಿ ಶ್ರೀಲಕ್ಷ್ಮೀ ರವರು ಧನ್ಯವಾದವನ್ನು ಸಮರ್ಪಿಸಿದರು.

Exit mobile version