Site icon Suddi Belthangady

ಉಜಿರೆ ಗ್ರಾಮ ಪಂಚಾಯತಿನಲ್ಲಿ ಮಹಿಳಾ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಮಹಿಳಾ ಗ್ರಾಮ ಸಭೆ ಡಿ.14ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾ ಭವನದಲ್ಲಿ ಜರಗಿತು.

ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ರತ್ನಾವತಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು.ಸಿಬ್ಬಂದಿಗಳು ಸಹಕರಿಸಿದರು.ಮಹಿಳಾ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Exit mobile version