Site icon Suddi Belthangady

ಮಚ್ಚಿನ: ಸ.ಹಿ.ಪ್ರಾ ಶಾಲೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಇಂಪೋರ್ಟೆನ್ಸ್ ಆಫ್ ಲೈಬ್ರೆರಿ ಕಾರ್ಯಕ್ರಮ

ಮಚ್ಚಿನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಚ್ಚಿನ ಇದರ ಸಂಯುಕ್ತ ಆಶ್ರಯದಲ್ಲಿ ಇಂಪೋರ್ಟೆನ್ಸ್ ಆಫ್ ಲೈಬ್ರೆರಿ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಫೌಂಡೇಷನ್ ಇದರ ತಾಲೂಕು ಸಂಯೋಜಕ ಅಮೃತ್ ಭಾಗವಹಿಸಿ ಮಾತನಾಡಿದ ಅವರು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಪ್ರಬುದ್ಧರಾಗಿ ಬದುಕಲು ಸಾಧ್ಯವಾಗುತ್ತದೆ.ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ವಿಷಯಗಳ ಕುರಿತಾದ ಜ್ಞಾನ ಅತ್ಯಗತ್ಯ.

ಆದುದರಿಂದ ಗ್ರಂಥಾಲಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕಡೆ ಕಾರ್ಯಪ್ರವೃತರಾಗಿ ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಆಗ್ನೇಸ್ ಪ್ರಮೀಳಾ ಲೋಬೊ ಮತ್ತು ಸಹ ಶಿಕ್ಷಕ ರಮೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಶಾಹಿದ್ ಅಫ್ರೀದ್ ಸ್ವಾಗತಿಸಿದರು.ವೀಕ್ಷಿತಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಿಯನ್ನ ವೆನಿಸ ಪಾಯಸ್ ಧನ್ಯವಾದವಿತ್ತರು.

Exit mobile version