ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

0

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.1 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ವಠಾರದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಜೆಸಿ ಹೆಚ್ ಜಿ.ಎಫ್ ಸಂತೋಷ್ ಜೈನ್, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಕಾರ್ಯದರ್ಶಿ ಅಕ್ಷತ್ ರೈ, ಕೋಶಾಧಿಕಾರಿ ವಿದ್ಯೆಂದ್ರ ಗೌಡ ಮತ್ತು ಬಾಬು ಗೌಡ ಎಣ್ಣೆಗದ್ದೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here