ಬೆಳ್ತಂಗಡಿ : ದ. ಕ. ಜಿಲ್ಲಾ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ 18 ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.17 ರಂದು ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಿತು.
ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ರಾಷ್ಟ್ರ ಧ್ವಜಾರೋಹಣ ಗೈದು ಶುಭ ಕೋರಿದರು.
ದ. ಕ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಪರಿಷತ್ ಧ್ವಜಾರೋಹಣವನ್ನು, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಯದುಪತಿ ಗೌಡ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು.
ನಂತರ ನಡೆದ ಉದ್ಘಾಟಟನೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ನಾಗರಾಜ ರಾವ್ ಕಲ್ಕಟ್ಟೆ ನೆರವೇರಿಸಿದರು.
ಶಾಸಕ ಹರೀಶ್ ಪೂಂಜ ಚಾರುಮುಡಿ ಸಂಚಿಕೆ ಬಿಡುಗಡೆಗೊಳಿಸಿದರು. ಸಮ್ಮೇಳನಾಧ್ಯಕ್ಷ ಪ್ರೊ.ಎ. ಕೃಷ್ಣಪ್ಪ ಪೂಜಾರಿ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಾಜೇಶ್ವರಿ ಎಂ., ಜಿಲ್ಲಾ ಸದಸ್ಯರಾದ ರೇವಣ್ಣ, ಮಾಧವ ಎಂ. ಕೆ.,ಸಮ್ಮೇಳನ ಸಂಯೋಜನಾ ಸಮಿತಿಯ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ, ಕೋಶಾಧಿಕಾರಿ ಮೀನಾಕ್ಷಿ, ಸಮ್ಮೇಳನ ಕಾರ್ಯದರ್ಶಿ ಪ್ರಮೀಳಾ, ಶ್ರೀಶ ಮುಚ್ಚಿನ್ನಾಯ, ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ ನಾಯಕ್,ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಾಮಕೃಷ್ಣ ಭಟ್ ವೇದಿಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಮ್ಮೇಳನದ ಸದಸ್ಯರು, ಸಾಹಿತಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.