Site icon Suddi Belthangady

ಬೆಳ್ತಂಗಡಿ ತಾಲೂಕು 18 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ, ಸನ್ಮಾನ

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.17 ರಂದು ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ನೆರವೇರಿದ ಸುವರ್ಣ ಕರ್ನಾಟಕ ಭಾಷೆ – ಸಾಹಿತ್ಯ- ಸಂಸ್ಕೃತಿ ಆಶಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಮಾತನಾಡಿದರು.

ವಿವಿಧ ಕ್ಷೇತ್ರದ ಸಾಧಕರಾದ ಸಾಹಿತ್ಯ: ಡಾ.ಕೆ.ಎಂ.ಶೆಟ್ಟಿ ಬಳ್ಳಮಂಜ, ದೇಶಸೇವೆ: ಗೋಪಾಲಕೃಷ್ಣ ಭಟ್ ಕಾಂಚೋಡು, ನಾಟಿ ವೈದ್ಯೆ: ಬೇಬಿ ಪೂಜಾರಿ, ಶಿಕ್ಷಣ: ಡಾ.ಎನ್.ಎಂ.ಜೋಸೆಫ್, ಜನಪದ ವಸ್ತು ಸಂಗ್ರಾಹಕ: ಹೈದರಾಲಿ ಹಳ್ಳಿಮನೆ ಅವರನ್ನು ಸಮ್ಮಾನಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ,ಸಮ್ಮೇಳನ ಅಧ್ಯಕ್ಷ ಪ್ರೊ.ಎ.ಕೃಷ್ಣಪ್ಪ ಪೂಜಾರಿ ಸಮಾರೋಪ ನುಡಿಗಳನ್ನಾಡಿ,ವೇದಿಕೆಯಲ್ಲಿ ಸಮ್ಮೇಳನ ಸಂಯೋಜನಾ ಸಮಿತಿಯ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಸಮಿತಿ ಸದಸ್ಯ ಡಾ.ಎಂ.ಕೆ.ಮಾಧವ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ರಾಜೇಶ್ವರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಗೌರವ ಕಾರ್ಯದರ್ಶಿ ಪ್ರಮೀಳಾ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಮಂಗಳೂರು ಘಟಕದ ಮಂಜುನಾಥ್ ಎಸ್.ರೇವಣ್ಕರ್, ಕೋಶಾಧಿಕಾರಿ ಮೀನಾಕ್ಷಿ ಎನ್. ಗುರುವಾಯನಕೆರೆ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಸ್ವಾಗತಿಸಿದರು. ಸಮ್ಮೇಳನ ಸಂಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು ವಂದಿಸಿದರು. ಸಂಯೋಜನಾ ಸಮಿತಿ ಕಾರ್ಯದರ್ಶಿ ವಿಷ್ಣು ಪ್ರಕಾಶ ಎಂ. ನಿರೂಪಿಸಿದರು.

Exit mobile version