ನಿಡ್ಲೆ ಸ.ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

0

ನಿಡ್ಲೆ: ಡಿ.16ರಂದು ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪ್ರತಿಭಾ ದಿನಾಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ಯಾಮಲಾ, ಅಧ್ಯಕ್ಷರು ಗ್ರಾಮ ಪಂಚಾಯತ್ ನಿಡ್ಲೆ ಇವರು ವಹಿಸಿದ್ದರು.

ಉದ್ಘಾಟನೆಯನ್ನು ಊರಿನ ಹಿರಿಯರಾದ ಸತ್ಯನಾರಾಯಣ ರಾವ್ ಇವರು ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಕ್ಷೇತ್ರ ಸಮನ್ವಯಾಧಿಕಾರಿ ಗಣೇಶ್ ಐತಾಳ್ ಇವರು ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕಾದ ಗುರಿಯ ಬಗ್ಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು
ಮತ್ತು ಪೋಷಕರಿಗೆ ಅವರ ಜವಾಬ್ದಾರಿಯ ಬಗ್ಗೆ ಕಿವಿಮಾತು ಹೇಳಿದರು.

ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಇವರು ವರದಿ ವಾಚಿಸಿದರು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಮತ್ತು ಮೋಹನ್, ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್, ವಿನಾಯಕ ಜೋಶಿ , ಕಾತ್ಯಾಯಿನಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಪುರುಷೋತ್ತಮ ಗೌಡ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಯಕ್ಷ ನಾಟ್ಯವನ್ನು ಕಲಿಸುತ್ತಿರುವ ಈಶ್ವರ ಪ್ರಸಾದ್ ಇ.ವಿ.ಇವರನ್ನು ಸನ್ಮಾನಿಸಲಾಯಿತು.ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.ದತ್ತಿ ನಿಧಿ ನೀಡಲಾಯಿತು. ಶೋಲಿ ಇವರು ಸ್ವಾಗತಿಸಿ, ಸುಚಿತ್ರರವರು ವಂದಿಸಿದ ಈ ಕಾರ್ಯಕ್ರಮವನ್ನು ಶರತ್ ಕುಮಾರ್ ಇವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು, ಅತಿಥಿ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು, ಎಸ್ ಡಿ ಎಮ್ ಸಿ ಯ ಎಲ್ಲಾ ಸದಸ್ಯರು, ಪೋಷಕರು, ಪೂರ್ವ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನೀಡಿದರು.ಅದರಲ್ಲಿ ಹುಲಿ ವೇಷ ಕುಣಿತ ಮತ್ತು ಯಕ್ಷನಾಟ್ಯ ಗಮನ ಸೆಳೆದವು.

p>

LEAVE A REPLY

Please enter your comment!
Please enter your name here