ಉಜಿರೆ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 25 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಲಭಿಸಿದೆ.ಹೈಯರ್ ಗ್ರೇಡ್ ವಿಭಾಗದಲ್ಲಿ ಒಟ್ಟು 04 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 02 ವಿದ್ಯಾರ್ಥಿಗಳು ಅತ್ಯುತ್ತಮ, 02 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಲೋವರ್ ಗ್ರೇಡ್ ವಿಭಾಗದಲ್ಲಿ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 20 ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶ್ರೇಯಾ 8ನೇ ತರಗತಿ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನಲ್ಲಿಯೇ ಅತೀ ಹೆಚ್ಚು ಅಂಕ ಗಳಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾಳೆ.ಚಿತ್ರಕಲಾ ಶಿಕ್ಷಕಿ ಸುಮನ ಇವರು ಈ ಮಕ್ಕಳಿಗೆ ವಿಶೇಷ ತರಬೇತಿಯನ್ನು ನೀಡಿರುತ್ತಾರೆ.
ಈ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನೂ ಶಾಲಾ ಸಂಚಾಲಕರಾದ ಪೂಜ್ಯ ರೇ! ಫಾ! ಜೇಮ್ಸ್ ಡಿ’ಸೋಜಾ ಮತ್ತು ಪ್ರಾಂಶುಪಾಲರಾದ ಪೂಜ್ಯ ರೇ! ಫಾ! ವಿಜಯ್ ಲೋಬೋ ಇವರು ಅಭಿನಂದಿಸಿದ್ದಾರೆ.