ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಾರ್ಷಿಕೋತ್ಸವ ಡಿ.18ರಂದು ಜರಗಿತು.
ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಬಹುಮಾನ ವಿತರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರಗಿತು.
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ, ಕಳೆದ ಇಪ್ಪತ್ತೆರಡು ವರ್ಷಗಳಿಂದ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶಾಲೆಗೆ ಕೀರ್ತಿ ತಂದು ಇತ್ತೀಚೆಗೆ ಸೇವಾ ನಿವೃರಾದ ವಾರಿಜ ಎಸ್.ಗೌಡ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ ಆದ ಕು.ಕೀರ್ತನಾರವರನ್ನು ಸನ್ಮಾನಿಸಲಾಯಿತು.
ಸನ್ಮಾನವನ್ನು ನಿವೃತ್ತ ಕೃಷಿ ಅಧಿಕಾರಿಯಾದ ನಾರಾಯಣ ಸುವರ್ಣ, ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಎಳ್ಳುಗದ್ದೆ, ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಬಾಯಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಕನಿಕ್ಕಿಲ, ಬೆಳಾಲು ಸೊಸೈಟಿಯ ನಿರ್ದೇಶಕ ಸುಲೈಮಾನ್ ಭೀಮಂಡೆ, ಉಪಾಧ್ಯಕ್ಷರಾದ ವಸಂತಿ ಮಂಡಾಲು, ಯಶೋದಾ, ಭವಾನಿ ಮಾರ್ಪಾಲು, ಶಿಕ್ಷಕರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿನಿ ಕು.ದಿವ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.