ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಡಾ.ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಡಿ.17ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಮಾತನಾಡಿ, ‘ರಕ್ತದಾನ ಶ್ರೇಷ್ಠದಾನ, ಇನ್ನೊಬರ ಪ್ರಾಣ ಉಳಿಸುವ ಅಥವಾ ಇನ್ನೊಬ್ಬರಿಗೆ ಸಹಾಯ ಮಾಡುವ ಗುಣದಿಂದ ಮನುಷ್ಯ ಸಾರ್ಥಕ್ಯ ಪಡೆಯುತ್ತಾನೆ’ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾರಾವಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ.ಪ್ರಿಯಂ ರಕ್ತದಾನದ ಮಹತ್ವ ದ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ವೈದ್ಯರಾದ ಡಾ||ತಂಝಿರಾ, ಕಾಲೇಜು ವಿದ್ಯಾರ್ಥಿ ಪರಿಷತ್ತು ನಾಯಕ ಕೇಶವ ಶರ್ಮಾ, ಎನ್ಎಸ್ಎಸ್ ಕಾರ್ಯದರ್ಶಿ ಕು.ಅನ್ವಿತಾ ರಾವ್ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ದಿನೇಶ್ ಬಿ ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.