ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ಕೆನರಾ ಬ್ಯಾಂಕ್ ಇವರ ಸಹಯೋಗದಲ್ಲಿ ವಿಕಾಸಿತ್ ಭಾರತ ಸಂಕಲ್ಪ ಯಾತ್ರೆಯು ಉಜಿರೆ ಗ್ರಾಮ ಪಂಚಾಯತ್ ಗೆ ಡಿ.19 ರಂದು ಆಗಮಿಸಿದಾಗ ಬಹಳ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.ಬಳಿಕ ವಿವಿಧ ವಿಶೇಷ ಕಾರ್ಯಕ್ರಮಗಳು ನಡೆಯಿತು.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ನೋಡೆಲ್ ಉಷಾ ವೈ.ನಾಯಕ್ ಮಾಹಿತಿ ನೀಡಿದರು.ಲೀಡ್ ಬ್ಯಾಂಕ್ ಮೆನೇಜರ್ ಕವಿತಾ ಎನ್.ಶೆಟ್ಟಿ, ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕಿ ಪ್ರಿಯ ಪೋರ್ ವಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ನೀಡಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಮಲ್ಲಿಕಾರ್ಜುನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ ಪಂಚಾಯತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಮೋಹನ ಕುಮಾರ್ ಲಕ್ಷ್ಮೀ ಗ್ರೂಪ್, ಅರ್ಚನಾ ಆರ್.ಪೈ, ಪಂಚಾಯತ್ ಸಿಬ್ಬಂದಿ ರತ್ನ, ಲೀಲಾವತಿ, ಜನಪದ ಕಲಾವಿದ ರವೀಶ್ ಪಡುಮಲೆ, ಕ್ರೀಡಾ ಸಾಧಕಿ ಅರ್ಚನಾ, ಕೃಷಿ ಸಾಧಕ ರಮೇಶ್ ಭಟ್ ಇವರನ್ನು ಸನ್ಮಾನಿಸಲಾಯಿತು.ಪ್ರಸಾದ್ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.