Site icon Suddi Belthangady

ಕೇರಳದಲ್ಲಿ ಕೋವಿಡ್ ಆರ್ಭಟ- ಸಾರಿಗೆ ಇಲಾಖೆ ಅಲರ್ಟ್-ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ-ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ.ಈ ಹಿನ್ನಲೆ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾದ ರೂಪಾಂತರಿ ಜೆಎನ್1 ಪತ್ತೆಯಾದ ಹಿನ್ನಲೆ ಇದೀಗ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ.ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ.ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ.ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ.ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದ್ದಾರೆ.

Exit mobile version