ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಮಡಂತ್ಯಾರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು) ಬೆಂಗಳೂರು ಇವರು ನಡೆಸಿದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.

9ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಮೆಲಿಕಾ ಸಿಡೆಲ್ ಲಸ್ರಾದೋರವರು 498 ಅಂಕಗಳೊಂದಿಗೆ ತಾಲೂಕಿಗೆ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.ಹೈಯರ್ ಗ್ರೇಡ್ ಪರೀಕ್ಷೆಗೆ ಕುಳಿತ 52 ವಿದ್ಯಾರ್ಥಿಗಳಲ್ಲಿ, 28 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರಿಗೆ ಶಾಲೆಯ ಚಿತ್ರಕಲಾ ಶಿಕ್ಷಕ ಚಿದಾನಂದರವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here