ಬೆಳ್ತಂಗಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಗಾರ, ತಾಲೂಕು ಸಮಿತಿ ರಚನೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಗಾರ ಮತ್ತು ಬೆಳ್ತಂಗಡಿ ತಾಲೂಕು ಸಮಿತಿ ರಚನೆ ಡಿ.21 ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಾಗಾರದಲ್ಲಿ ಹವಾಮಾನ ಬದಲಾವಣೆ ಮತ್ತು ಕೃಷಿಯ ಮೇಲೆ ಪರಿಣಾಮ, ರೈತ ಸಂಘದ ಹುಟ್ಟು ಸಾಗಿ ಬಂದ ಮತ್ತು ಮುಂದೆ ಸಾಗಲಿರುವ ಕುರಿತು ಸಮಾಲೋಚನೆ ನಡೆಯಿತು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಕೃಷಿ ತಜ್ಞರು, ಲೇಖಕ ಅವಿನಾಶ್ ಟಿ.ಜಿ.ಎಸ್., ಯುವ ಘಟಕದ ರಾಜ್ಯ ಸಂಚಾಲಕ ಆದಿತ್ಯ ನಾರಾಯಣ ಕೊಲ್ಲಾಜೆ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡಿಸ್, ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಭಾಗವಹಿಸಿ ಸಂಘಟನೆ, ರೈತರ ಸಮಸ್ಯೆ, ಪರಿಹಾರದ ಕುರಿತು ಮಾತನಾಡಿದರು.

LEAVE A REPLY

Please enter your comment!
Please enter your name here