Site icon Suddi Belthangady

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

ಪುದುವೆಟ್ಟು: ಡಿ.20ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.

ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮಿಯ್ಯಾರು ಇಲ್ಲಿನ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ ರವರು ತಮ್ಮ ದಿವ್ಯ ಹಸ್ತದಿಂದ ದೀಪ ಪ್ರಜ್ವಲನ ಮಾಡುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕ್ರೀಡಾಕೂಟದ ತೀರ್ಪುಗಾರರಾದ ಉಜಿರೆ ನ್ಯಾಚುರಪತಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಹಾಗೂ ಉಜಿರೆ ಸೆಕೆಂಡರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿತ್ಯಾನಂದ ಗೌಡರವರು ವಾರ್ಷಿಕ ಕ್ರೀಡಾಕೂಟ ಎನ್ನುವುದು ವಿದ್ಯಾರ್ಥಿಗಳಿಗೆ ಬಹಳ ಸಂತೋಷದ ವಿಷಯವಾಗಿದೆ, ಮಕ್ಕಳಲ್ಲಿ ಇರುವಂತಹ ಸೂಕ್ತ ಪ್ರತಿಭೆಯನ್ನು ಹೊರಹಾಕಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಮುಖ್ಯವಲ್ಲ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶೀನಪ್ಪ ಗೌಡರವರು ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕ ಬಂಧುಗಳಿಗೆ ಕೂಡ ಈ ಕ್ರೀಡಾಕೂಟವನ್ನು ನಾವು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಕೂಡ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದ್ದೀರಿ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧರ್ಮೇಂದ್ರ ಅವರು ಸಣ್ಣ ವಯಸ್ಸಿನ ಮಕ್ಕಳಲ್ಲಿ ಸೋಲು ಗೆಲುವು ಎನ್ನುವುದು ಅಷ್ಟೊಂದು ಪ್ರಮುಖವಾದ ಪಾತ್ರ ವಹಿಸುವುದಿಲ್ಲ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ನೀಡಿದರು.ಕಾರ್ಯಕ್ರಮವನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ಎನ್ ರವರು ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Exit mobile version