ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ‌ ಬಂಧನ‌

0

ಬೆಳ್ತಂಗಡಿ: ನ್ಯಾಯಾಲಯದ‌ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು‌ ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ‌ 71/2008ರಂತೆ ಕಲಂ 457 ಮತ್ತು 380ರಡಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿದ್ದು‌ ಕಳೆದ ಐದಾರು‌ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ಶರೀಫ್ ಯಾನೆ ಮಹಮ್ಮದ್ ಶರೀಫ್ (43ವ ) ಎಂಬಾತನನ್ನು ವೇಣೂರು ಠಾಣಾ ಸಿಬ್ಬಂದಿಗಳಾದ ಪ್ರವೀಣ್ ಎಂ. ಮತ್ತು ಸಚಿನ್ ರವರುಗಳು ವಿಟ್ಲದ ಸಾರಡ್ಕದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

p>

LEAVE A REPLY

Please enter your comment!
Please enter your name here