Site icon Suddi Belthangady

ಬೆಳಾಲು: ಮಾಯ ಸರಕಾರಿ ಉನ್ನತೀಕರಿಸಿದ ಪ್ರಾ.ಶಾಲಾ ಪ್ರತಿಭಾ ದಿನಾಚರಣೆ

ಬೆಳಾಲು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಶಾಲಾ ಹಳೆವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರತಿಭಾ ದಿನಾಚರಣೆ ಡಿ.23 ರಂದು ಜರಗಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಅಧ್ಯಕ್ಷ ಸುರೇಂದ್ರ ಗೌಡ ಎಸ್.ವಹಿಸಿದ್ದರು.

ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಪ್ರಧಾನ ಭಾಷಣ ಮಾಡಿದರು.

ಬೆಳಾಲು ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿನೇಶ್ ಕೋಟ್ಯಾನ್,ಜಯಂತಿ, ಪ್ರೇಮ, ಕೃಷ್ಣಯ್ಯ ಆಚಾರ್ಯ,ಸಮುದಾಯ ಸಂಪಲ್ಮನ ವ್ಯಕ್ತಿ ಪ್ರತಿಮಾ, ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಪೆಲತ್ತಡಿ, ಮಾಯ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಮಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಯ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಭವಾನಿ,ಶಾಲಾ ನಾಯಕ ರತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ವಿಶ್ವನಾಥ ಪೂಜಾರಿ ಸ್ವಸ್ತಿ ವಚನಗೈದರು.ಶಾಲಾ ಮುಖ್ಯ ಶಿಕ್ಷಕ ವಿಠಲ ಎಂ. ವರದಿ ವಾಚಿಸಿದರು.ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕ ಯೋಗೀಶ್ ಹೆಚ್. ಆರ್. ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆ ನಡೆದ ಧ್ವಜರೋಹಣವನ್ನು ಪ್ರಗತಿಪರ ಕೃಷಿಕ ಸಂಜೀವ ಗೌಡ ಕನಿಕ್ಕಿಲ ನೆರವೇರಿಸಿದರು.

ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಿದ ಉದ್ಯಮಿ ಜಯಾನಂದ ಮಿನಂದೇಲು, ವಿಶ್ವನಾಥ ಪಿ., ಎನ್. ಎಂ. ಎಂ. ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾದ ಕು. ವಷ್ಣವಿ, ಶ್ರೇಯಸ್, ಲಿಖಿತ, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಸೃಜನ್ಯ, ಶಾಲೆಗೆ ಕಂಪ್ಯೂಟರ್ ಒದಗಿಸಿದ ಹಕೀಮ್, ರಫೀಕ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್ ಡಿ ಎಂ ಸಿ ಸದಸ್ಯರು, ಹೆತ್ತವರು ಊರವರು ಹಾಜರಿದ್ದರು.

ಬೆಳಿಗ್ಗೆ ಹೆತ್ತವರಿಗೆ, ಊರವರಿಗೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ, ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

Exit mobile version