ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ, ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿ ಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

0

ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಯೋಜನೆ ಗೃಹಲಕ್ಷೀ.ಈ ಯೋಜನೆಯಡಿ ನೋಂದಣಿ ಮಾಡಿಕೊಂಡ ಪಲಾನುಭವಿಗಳಿಗೆ ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ ರೂ 2,000 ನೇರ ನಗದನ್ನು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ.

ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ನಿಷ್ಟ್ರೀಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡುಬರುತ್ತಿದ್ದು.ಈ ಪಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಚಿಸಿರುವುದು ಗಮನಕ್ಕೆ ಬಂದಿರುತ್ತದೆ.ಹಾಗೆ ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರಣೆ ಮಾಡುವುದು ಕಡ್ಡಾಯವಾಗಿರುತ್ತದೆ.

ಗೃಹಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಯಾಂಪ್ ಗಳನ್ನು ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ.ಅದರಂತೆ ದಿನಾಂಕ 27.12.2023 ರಿಂದ 29.12.2023 ರವರೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ನಲ್ಲಿ ಸಂಬಂದಿಸಿದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದೆ.

ಈ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಗ್ರಾಮವಾರು ಸಂಚಾಲಕರನ್ನು ನೇಮಿಸಲಾಗಿದೆ.

LEAVE A REPLY

Please enter your comment!
Please enter your name here