ನಾವೂರು ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

0

ನಾವೂರು: ಡಿ.22ರಂದು ಗ್ರಾಮ ಪಂಚಾಯತ್ ನಾವೂರು ಮತ್ತು ಕೆನರಾ ಬ್ಯಾಂಕ್ ಬಂಗಾಡಿ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವಠಾರದಲ್ಲಿ “ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ” ವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುನಂದ ಇವರ ಅಧಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದಿಂದ ಸಿಗುವ ಮಾನ್ಯ ಪ್ರಧಾನ ಮಂತ್ರಿಗಳ ವಿವಿಧ ಯೋಜನೆಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಇವರು ನೀಡಿದ್ದರು.

ಕೃಷಿಯ ಬಗ್ಗೆ ಮಾಹಿತಿಯನ್ನು ಡಾ.ಮಧು ಸೂಧನ ಕೃಷಿ ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರು ಮಾಹಿತಿ ನೀಡಿದ್ದರು.ಸಭೆಯಲ್ಲಿ ತೃಪ್ತಿ ಸಂಜೀವಿನಿ ಒಕ್ಕೂಟ ನಾವೂರು ಇವರ ವತಿಯಿಂದ ಹಳ್ಳಿ ಸಂತೆ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಮತ್ತು ಸದಸ್ಯರು ಹಾಗೂ ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉದ್ಘಾಟನೆ ನಡೆಸಿದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ, ಆರೋಗ್ಯವಂತ ಅಂಗನವಾಡಿ ಮಕ್ಕಳಿಗೆ, ಮುದ್ರಾ ಯೋಜನೆಯಡಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಟೈಲರಿಂಗ್ ಸಾಧಕರಿಗೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಯಾದ ಜೀವಿತ್ ಇವರಿಗೆ ಸನ್ಮಾನಿಸಲಾಯಿತು.

ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಉಜ್ವಲ ಗ್ಯಾಸ್ ಗೆ ಹೊಸದಾಗಿ ಅರ್ಜಿ ಸಲ್ಲಿಸುವುದು. ಹಾಗೂ ಈ ಹಿಂದೆ ಗ್ಯಾಸ್ ಪಡೆದವರು ಎಲ್ಲರೂ ತಮ್ಮ ಬೆರಳಚ್ಚು( THUMB) ನೀಡುವುದು.ಕಿಸಾನ್ ಸನ್ಮಾನ್ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸುವುದು.ಬಿ.ಪಿ, ಶುಗರ್ ಇತ್ಯಾದಿ ಆರೋಗ್ಯ ತಪಾಸಣಾ ಶಿಬಿರ, ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅರ್ಜಿ ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಮತ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್, ಬಾಲಕೃಷ್ಣ, ವೇದಾವತಿ, ಶಾಂತಿ, ಎನ್ ಕೆ ಹಸೈನಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ ವೆಂಕಟ ಕೃಷ್ಣ ರಾಜ, ಕೆನರಾ ಬ್ಯಾಂಕ್ ಮೇನೆಜರ್ ಶ್ಯಾಮ್ ಕಿಶೋರ್, ತಾಲೂಕು ವಲಯ ಮೇಲ್ವಿಚಾರಕರಾದ ಜಯಾನಂದ, ಊರಿನ ಗಣ್ಯರು, ಜನಪ್ರತಿನಿಧಿಗಳು, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವ್ಯಾಪಾರ ವ್ಯವಹಾರಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ತೃಪ್ತಿ ಸಂಜೀವಿನಿ ಒಕ್ಕೂಟದ ಎಂಬಿಕೆ, ಎಲ್ ಸಿ ಆರ್ ಪಿ, ಅಧ್ಯಕ್ಷರು, ಸರ್ವ ಸದಸ್ಯರು, ಊರಿನ ಗ್ರಾಮಸ್ಧರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸ.ಹಿರಿಯ ಪ್ರಾಥಮಿಕ ಶಾಲಾಭಿವೃಧ್ದಿ ಸಮಿತಿಯ ಅಧ್ಯಕ್ಷ ಸುರೇಶ್ ನಿರೂಪಿಸಿ, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಮಮತ ಸ್ವಾಗತಿಸಿ, ಸದಸ್ಯ ಗಣೇಶ್‌ ಗೌಡ ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here