Site icon Suddi Belthangady

ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ- ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಠಾಣೆಗೆ ‘ವಿಮ್’ ದೂರು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಘಟಕದ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗೂ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.

ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ಘಟಕ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ಅಡ್ವೋಕೇಟ್ ಅಸ್ಮಾ ಮತ್ತು ಸೌದ ಬೆಳ್ತಂಗಡಿ ಉಪಸ್ಥಿತರಿದ್ದರು.

Exit mobile version