Site icon Suddi Belthangady

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಅನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು.ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು ಉಪಸ್ಥಿತರಿದ್ದರು.ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಮನೋಭಾವವನ್ನು ವ್ಯಕ್ತಪಡಿಸಲು ಕ್ರಿಸ್ಮಸ್ ಒಂದು ವಿಶೇಷ ಮಾರ್ಗವಾಗಿದೆ, ಈ ಕ್ರಿಸ್ಮಸ್ ದಿನವನ್ನು ನಾವು ಸ್ಮರಣೀಯವಾಗಿ ನೆನಪಿಸಿಕೊಳ್ಳಬೇಕು ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕುಮಾರಿ ಪರ್ಲ್ ತಾವ್ರೋ ಮತ್ತು ಜೇಡನ್ ರವರು ನಿರೂಪಿಸಿ, ಪ್ರೀಯಲ್ ರವರು ಸ್ವಾಗತಿಸಿ, ಮೇರಿಟಾ ರವರು ಧನ್ಯವಾದಗಳು ಸಮರ್ಪಿಸಿದರು.ನಂತರ ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು.

Exit mobile version