ಧರ್ಮಸ್ಥಳ: ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗೂ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂಧರ್ಭದಲ್ಲಿ ವಿಮ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಆಶಿಕಾ, ಅಝ್ವೀನಾ ಚಾರ್ಮಾಡಿ, ಸಾಹಿನಾ, ಆಯಿಷಾ, ಮರಿಯಮ್ಮ ಉಪಸ್ಥಿತರಿದ್ದರು.
p>