ಹೊಕ್ಕಿಲ ದ.ಕ.ಜಿ.ಪಂ.ಸ.ಕಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಬೆಳ್ತಂಗಡಿ: ದ.ಕ.ಜಿ.ಪಂ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಕ್ಕಿಲ ಇದರ 2023-24 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.26ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಪ್ರೇಮ ಇವರು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಎ.ವಿಜಯ ಗೌಡ, ಚಂದ್ರಹಾಸ ಗೌಡ, ಶಾಲಾ ನಿರ್ಮಾಣಕ್ಕೆ ಸ್ಥಳ ದಾನ ಮಾಡಿದ ಅಣ್ಣು ಗೌಡ ಆನಂದ್ರಬೈಲು, ಶಾಲಾ ಮುಖ್ಯೋಪಾಧ್ಯಾಯರಾದ ನಿಶಾ ಕುಮಾರಿ, ಚಂದ್ಕೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾದ ತುಳಸಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿವಾಕರ ಹಾಗೂ ಇಲಾಖಾ ವತಿಯಿಂದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಪೈಲಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಶಾಲಾ ಸಹ ಶಿಕ್ಷಕಿಯಾದ ಮಮತಾ ಇವರ ನಿರೂಪಣೆಯೊಂದಿಗೆ, ಶಾಲಾ ಮಕ್ಕಳ ಪೋಷಕರ, ಎಸ್.ಡಿ.ಎಂ.ಸಿ. ಸದಸ್ಯರ ಹಾಗೂ ಊರವರ ಸಹಕಾರದಿಂದ ಕಾರ್ಯಕ್ರಮವು ಅಭೂತಪೂರ್ವವಾಗಿ ನಡೆಯಿತು.

LEAVE A REPLY

Please enter your comment!
Please enter your name here