ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ-ಧಾರ್ಮಿಕ ಸಭೆ

0

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಇದರ ಅಂಗವಾಗಿ ಡಿ.26 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ದೇವಸ್ಥಾನದ ಆಡಳಿತ ಮೊಕ್ತಸರ ಜೀವಂದರ ಕುಮಾ‌ರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು, ಬೆಳಾಲು ಗ್ರಾ.ಪಂ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವರಿಗೆ ಪುಷ್ಪ ಕನ್ನಡಿ ಸೇವಾಕರ್ತರಾದ ಗಿರೀಶ್ ಕುದ್ರೆತ್ತಾಯ, ಲಲಿತ, ದೇವಸ್ಥಾನದ ಪ್ರಧಾನ ಅರ್ಚಕ ಅನಂತರಾಮ ಶಬರಾಯ ಇವರನ್ನು ಸನ್ಮಾನಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಸ್ವಾಗತಿಸಿ, ಕಾರ್ಯದರ್ಶಿ ಗ್ರಾ.ಪಂ.ಸದಸ್ಯ ಸತೀಶ್ ಗೌಡ ಎಳ್ಳುಗದ್ದೆ ವಂದಿಸಿದರು.ಗಿರೀಶ್ ಮಂಜೊತ್ತು ನಿರೂಪಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಉಪಸಮಿತಿಯ ಸಂಚಾಲಕರು, ಬೈಲುವಾರು ಸಮಿತಿಯ ಸಂಚಾಲಕರು, ಸದಸ್ಯರು,ಶ್ರೀ ಅನಂತೇಶ್ವರ ಭಜನಾ ಮಂಡಳಿ, ಶ್ರೀ ಅನಂತಪದ್ಮನಾಭಾ ಮಹಿಳಾ ಭಜನಾ ತಂಡದ ಪದಾಧಿಕಾರಿಗಳು, ಸದಸ್ಯರು ಊರವರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here