ಹೊಸಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

0

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಲೊಟ್ಟು ‌ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here