Site icon Suddi Belthangady

ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಲಾಯಿಲ: ಎಲ್ಲಾ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಶಿಕ್ಷಣ ಅತಿ ಮುಖ್ಯವಾಗಿದೆ.ಪ್ರಸ್ತುತ ಕಾಲಘಟ್ಟದ ಔದ್ಯೋಗಿಕ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಧಾರಿತ ಜ್ಞಾನವೂ ತುಂಬಾ ಪ್ರಾಮುಖ್ಯ.ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ವೃತ್ತಿಗೆ ಪೂರಕ ತರಬೇತಿಯನ್ನು ಅಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಮೇಲಂತಬೆಟ್ಟು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಕುಶಾಲಪ್ಪ ಇವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿ ಶ್ರೀನಿವಾಸ್ ಇವರು ಮಾತನಾಡಿ ತಂತ್ರಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಮಾಡುವುದು ಇಂದಿನ ಪ್ರಪಂಚದ ಬೆಳವಣಿಗೆಯ ತೀವ್ರತೆಗೆ ಬಹಳ ಮುಖ್ಯ ಎಂದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 40 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡಕೊಂಡಿರುತ್ತಾರೆ. ಇದರಲ್ಲಿ 16 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ಹಾಗೂ ಉಳಿದ 24 ಮಂದಿ ‘ಎ’ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಂದರ್ಭ ತರಬೇತಿ ಕೇಂದ್ರದ ಪ್ರಾಂಶುಪಾಲ ಸೋಮನಾಥ್ ಕೆ., ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Exit mobile version